ಪಂಜ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿಯಾಗಿ ಶ್ರೀಧರ್ ರವರು ಅಧಿಕಾರ ಸ್ವೀಕಾರ

0

 

ಪಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಶ್ರೀಧರ್ ರವರು ಆ.20 ರಂದು ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪಂಜ ಗ್ರಾಮ ಪಂಚಾಯತ್ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಿ.ಎಂ. ಕೀರ್ತಿ ಪ್ರಸಾದ್ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ದೇರಾಜೆ, ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.