ಐವರ್ನಾಡು ಸ.ಹಿ.ಪ್ರಾ.ಶಾಲೆಗೆ ಅವಳಿ ಪ್ರಶಸ್ತಿ
ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಬೆಸ್ಟ್ ಕುರಿಯಕೊಸ್ ಶಾಲೆ ಗುತ್ತಿಗಾರಿನಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾರೆ.
ಬಾಲಕರ ವಿಭಾಗದಲ್ಲಿ ಉತ್ತಮ ಓಟಗಾರನಾಗಿ ಹಾಗೂ ಹಿತೇಶ್.ಎಸ್ ಸರ್ವಾಂಗೀಣ ಆಟಗಾರನಾಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಪ್ರತೀಕ್ಷಕೆ ಉತ್ತಮ ಆಟಗಾರ್ತಿಯಾಗಿ ಹಾಗೂ ಆಶಾಲತಾ.ಎಸ್ ಸರ್ವಾಂಗೀಣ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಮಾಲತಿ.ಬಿ ತರಬೇತಿ ನೀಡುತ್ತಾರೆ.