ಕಲ್ಲುಗುಂಡಿ: ಬೈಕ್ – ಸ್ಕೂಟಿ ಡಿಕ್ಕಿ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಿಗೆ ಗಾಯ

0

 

ಬೈಕ್ ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಮಧುಸೂದನ್ ಎಂಬುವವರ ಸೊಂಟಕ್ಕೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಧುಸೂದನ್ ಅವರು ಕಲ್ಲುಗುಂಡಿ ಸರಕಾರಿ ಪ್ರಾಥಮಿಕ ಶಾಲೆಯ ಎಸ್ ಡಿಎಂ ಸಿ ಅಧ್ಯಕ್ಷರಾಗಿದ್ದು, ಶಾಲೆಯ ಕ್ರೀಡಾ ಕಾರ್ಯಕ್ರಮವೊಂದರ ನಿಮಿತ್ತ ಓಡಾಟ ನಡೆಸುತ್ತಿದ್ದರು. ಈ ವೇಳೆ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಲ್ಲುಗುಂಡಿ ಪೊಲೀಸರು ಆಗಮಿಸಿದ್ದಾರೆ.