ಅರಂತೋಡು : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸ್ಕಾರ್ಪಿಯೋ

0

 

ಪುತ್ತೂರಿನತ್ತ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಅರಂತೋಡು ಕೊಡಂಕಿರಿ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಭಾನುವಾರ ರಾತ್ರಿ ವೇಳೆ ಈ ದುರ್ಘಟನೆ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಪುತ್ತೂರಿಗೆ ಚಲಿಸುತ್ತಿದ್ದ ಸಂದರ್ಭ ರಸ್ತೆಯಲ್ಲಿ ತಿರುವು ಇದ್ದರೂ ಗಮನಕ್ಕೆ ಬಾರದೇ ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ನೇರವಾಗಿ ಹೋಗಿ ರಸ್ತೆ ಬದಿಯ ಪೊದೆಯಲ್ಲಿ ಸಿಲುಕಿಕೊಂಡಿದೆ. ಸ್ಥಳಕ್ಕೆ ಸ್ಥಳೀಯರು ಆಗಮಿಸಿ ಸ್ಕಾರ್ಪಿಯೋವನ್ನು ಎತ್ತುವ ಕಾರ್ಯಾಚರಣೆ ಮಾಡಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.