ಬೊಳುಬೈಲು: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಕಾರು – ಜಖಂ

0

ಮಂಗಳೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟಕ್ಕೆ ಉರುಳಿದ ಘಟನೆ ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಆ.22ರಂದು ಮುಂಜಾನೆ ಸಂಭವಿಸಿದೆ.


ಸುಳ್ಯ ಗಾಂಧಿನಗರ ನಿವಾಸಿ ಮುನೀರ್ ಅವರು ತಮ್ಮ ಕಾರಿನಲ್ಲಿ ಕುಟುಂಬದವರೊಂದಿಗೆ ಮಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಬೊಳುಬೈಲಿನ ದೇವ ರಬ್ಬರ್ ನರ್ಸರಿ ಬಳಿ ತಲುಪುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟಕ್ಕೆ ಉರುಳಿತೆನ್ನಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ