ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ : ಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯತಿಥಿ ಆಚರಣೆ

0

 

 

  ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮ ಪತ್ನಿ ದಿ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 10ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಆ. 22ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ.ಯವರು ಶ್ರೀಮತಿ. ದಿ. ಜಾನಕಿ ವೆಂಕಟ್ರಮಣ ಗೌಡರ ತತ್ವ – ಆದರ್ಶಗಳನ್ನು ತಿಳಿಸಿ ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ  ಚಂದ್ರಶೇಖರ್ ಪೇರಾಲ್, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಶ್ರೀಮತಿ ದಿ. ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.