ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ೧೦ನೇ ಪುಣ್ಯ ಸ್ಮರಣೆ

0

 

ಸುಳ್ಯದ ಅಮರ ಶಿಲ್ಪಿ, ಶಿಕ್ಷಣ ಕ್ರಾಂತ್ರಿಯ ಹರಿಕಾರ, ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ| ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ೧೦ನೇ ಪುಣ್ಯ ಸ್ಮರಣೆ ಕಾರ್ಯಕ್ರಮವು ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್   ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತೃಶ್ರೀಯವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು, ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮೋಕ್ಷ ನಾಯಕ್, ವಿಭಾಗ ಮುಖ್ಯಸ್ಥರುಗಳಾದ ಡಾ. ಶರತ್ ಕುಮಾರ್ ಶೆಟ್ಟಿ, ಡಾ. ಸವಿತ ಸತ್ಯಪ್ರಸಾದ್, ಡಾ. ದಯಾಕರ್, ಡಾ. ಜಯಪ್ರಕಾಶ್ ಅನೆಕರ್, ಡಾ. ಪ್ರಸನ್ನ ಕುಮಾರ್, ಡಾ. ಹರಿಚ್ಚಂದ್ರ ರೈ, ಆಡಳಿತಾಧಿಕಾರಿ ಬಿ.ಟಿ ಮಾಧವ, ಎ.ಓ.ಎಲ್.ಇ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ, ಕೆ.ವಿ.ಜಿ ಪಾಲಿಟೆಕ್ನಿಕ್ ಸಿಬ್ಬಂದಿ ಅರುಣ್ ಕುರುಂಜಿ ಕೆ.ವಿ.ಜಿ ದಂತ ಮಹಾವಿದ್ಯಾಲಯದ ಬೋಧಕ, ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.