ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

0

 

 

ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ

 

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗಳನ್ನು ಪೊಲೀಸ್ ಇಲಾಖೆಯ ವತಿಯಿಂದ ಪ್ರಸಂಶನಾ ಪತ್ರ ನೀಡಿ ಅಭಿನಂದಿಸಿ ಗೌರವಿಸಲಾಯಿತು. ಆರೋಪಿತರನ್ನು ಪತ್ತೆ ಹಚ್ಚಲು ಬೆಳ್ಳಾರೆ,ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು ,ಬಂಟ್ವಾಳ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ವಲಯದ ಅಧಿಕಾರಿ
ಸಿಬ್ಬಂದಿಗಳ ತನಿಖಾ ತಂಡ ರಚಿಸಿ, ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಗಳಲ್ಲಿ ಪತ್ತೆಗೆ ಪ್ರಯತ್ನಿಸಲಾಗಿತ್ತು. ಒಟ್ಟು 82 ಮಂದಿ ಅಧಿಕಾರಿ ಹಾಗು ಸಿಬ್ಬಂದಿಗಳ ತನಿಖಾ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತದೆ.

ಅಲ್ಲದೆ ಆ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಸೇರಿದಂತೆ ವಿವಿಧ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿರುತ್ತಾರೆ. ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿ, ಆರೋಪಿತರನ್ನು ಪತ್ತೆ ಹಚ್ಚಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಶ್ಚಿಮ ವಲಯ ಪೊಲೀಸ್‌ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅವರು ವಹಿಸಿ ಪೊಲೀಸ್ ಹಾಗು ಅಧಿಕಾರಿ, ಸಿಬ್ಬಂದಿಗಳಿಗೆ ಬಹುಮಾನ ನೀಡಿ ಸನ್ಮಾನಿಸಿದರು. ದ.ಕ.ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ ಹಾಗು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.