ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರಿಗೆ ಪ್ರಶಂಸನಾ ಪತ್ರ

0

 

 

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಪೊಲೀಸ್ ಇಲಾಖೆಯ ವತಿಯಿಂದ ಪ್ರಸಂಶನಾ ಪತ್ರ ನೀಡಿ ಅಭಿನಂದಿಸಿ ಗೌರವಿಸಲಾಯಿತು.

ಆರೋಪಿತರನ್ನು ಪತ್ತೆ ಹಚ್ಚಲು ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ವಲಯದ ಅಧಿಕಾರಿ
ಸಿಬ್ಬಂದಿಗಳ ತನಿಖಾ ತಂಡ ರಚಿಸಿ, ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಗಳಲ್ಲಿ ಪತ್ತೆಗೆ ಪ್ರಯತ್ನಿಸಲಾಗಿತ್ತು. ಒಟ್ಟು 82 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಈ ಸಂದರ್ಭದಲ್ಲಿ ಸನ್ಮಾನಿಸಲಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣಾ ಪಿ.ಎಸ್.ಐ.ಗಳಾದ ರುಕ್ಮ ನಾಯ್ಕ್ ಮತ್ತು ಆನಂದ, ಎ.ಎಸ್.ಐ. ಸುಧಾಕರ್, ಕಾನ್ ಸ್ಟೇಬಲ್ ಗಳಾದ ಚಂದ್ರಶೇಖರ್, ಮಂಜುನಾಥ, ಹೆಚ್.ಸಿ. ಬಾಲಕೃಷ್ಣ, ಕೃಷ್ಣಪ್ಪ ಪಿ, ಸಂತೋಷ್, ಚಾಲಕ ಪುರಂದರ ಹಾಗೂ ಪ್ರವೀಣ ಬಾರ್ಕಿಯವರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಶ್ಚಿಮ ವಲಯ ಪೊಲೀಸ್‌ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅವರು ವಹಿಸಿ ಪೊಲೀಸ್ ಹಾಗು ಅಧಿಕಾರಿ, ಸಿಬ್ಬಂದಿಗಳಿಗೆ ಬಹುಮಾನ ನೀಡಿ ಸನ್ಮಾನಿಸಿದರು. ದ.ಕ.ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ ಹಾಗು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಗೌರವಾರ್ಪಣೆ ನಡೆಯಿತು.