ಐವರ್ನಾಡು : ಮುಖ್ಯರಸ್ತೆಯಲ್ಲಿ ಅಪಾಯಕಾರಿ ಮರ

0

 

ರೆಂಬೆಗಳು ರಸ್ತೆಗೆ ಬೀಳುವ ಆತಂಕ

ಐವರ್ನಾಡು ಪೆಟ್ರೋಲ್ ಬಂಕ್ ಬಳಿ ಮುಖ್ಯರಸ್ತೆಯಲ್ಲಿ ಬೃಹತ್ ಮಾವಿನ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು , ಆತಂಕಕ್ಕೆ ಕಾರಣವಾಗಿದೆ.
ಇದೇ ಮಾವಿನ ಮರದ ಕೆಳಭಾಗದಲ್ಲಿ ಪ್ರಯಾಣಿಕರ ತಂಗುದಾಣವಿದ್ದು ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿಗಾಗಿ ಇಲ್ಲಿ ಕುಳಿತಿರುತ್ತಾರೆ.
ಪ್ರತಿದಿನ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತಿದ್ದು ಮರದ ಬೃಹತ್ ರೆಂಬೆಗಳು ಎಲೆಗಳಿಂದ ಕೂಡಿದ್ದು ಮುರಿದುಬೀಳುವ ಆತಂಕ ಸೃಷ್ಟಿಯಾಗಿದೆ.
ಇದೇ ಮರದ ಕೆಳಭಾಗದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು, ಇದಕ್ಕೂ ಮುನ್ನ ಮರದ ಸಣ್ಣ ರೆಂಬೆಯೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ಕೂಡ ನಡೆದಿದೆ ಎನ್ನಲಾಗಿದೆ.
ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸಿ ಮುಂದೆ ಉಂಟಾಗಬಲ್ಲ ಅಪಾಯವನ್ನು ತಪ್ಪಿಸಬೇಕಾಗಿದೆ.