ಕೆವಿಜಿ ಐಪಿಎಸ್ ನಲ್ಲಿ ಮಾಸಿಕ ಸಭೆ

0

 

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾಸಿಕ ಸಭೆಯನ್ನು ಅ.22ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಐಪಿಎಸ್ ನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಶ್ರಮವನ್ನು ಶ್ಲಾಘಿಸಿದರು ಜೊತೆಗೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ. ವಿ ಇವರ ನಿರ್ದೇಶನದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಇನ್ನು ಹೆಚ್ಚಿನ ಪ್ರಗತಿಪರ ಚಟುವಟಿಕೆಗಳನ್ನು ಕೈಗೊಳ್ಳಲು ‘ಲ್ಯಾಬ್ ಟಾಪ್ ‘ ಕೊಡುಗೆಯನ್ನಾಗಿ ಶಾಲೆಗೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ರವರು ಶಾಲಾ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಹಾಗೂ ಆಡಳಿತ ಮಂಡಳಿಯ ಸಹಕಾರವನ್ನು ಸ್ಮರಿಸಿ, ಧನ್ಯವಾದವನ್ನು ಸಲ್ಲಿಸಿದರು. ಈ ಸಭೆಯಲ್ಲಿ ಉಪಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.