ಸೆ.2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

0

 

p>

 

ಸುಳ್ಯದಿಂದ 15 ಸಾವಿರ ಕಾರ್ಯಕರ್ತರು ಭಾಗವಹಿಸಲು ನಿರ್ಧಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ ಎರಡರಂದು ಮಂಗಳೂರಿಗೆ ಆಗಮಿಸಲಿದ್ದು ಆ ಕಾರ್ಯಕ್ರಮದಲ್ಲಿ ಸುಳ್ಯದಿಂದ 15000 ಕಾರ್ಯಕರ್ತರು ಭಾಗವಹಿಸುವುದೆಂದು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ.

 

 

 

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಹಾಗೂ ಪಕ್ಷದ ಪ್ರಮುಖರ ಸಭೆ ಆ.23 ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ ಸುಳ್ಯ ಮಂಡಲ ಅಧ್ಯಕ್ಷಹರೀಶ್ ಕಂಜಿಪಿಲಿ ಪ್ರಸಕ್ತ ಚುನಾವಣಾ ವರ್ಷದಲ್ಲಿ ಪಕ್ಷದ ಕಾರ್ಯವೈಖರಿಯ ಬಗ್ಗೆ ಮಾರ್ಗದರ್ಶನ ನೀಡಿದರು.
ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಸುಳ್ಯದಿಂದ 15000 ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದೆಂದು ನಿರ್ಧಾರ ಕೈಗೊಳ್ಳಲಾಯಿತು.ಪಕ್ಷದ ಪ್ರಮುಖರಾದ ರಾಧಾಕೃಷ ಬುಡಿಯಾರ್ ಮುಂದಿನ ದಿನಗಳಲ್ಲಿ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಬಲಿಷ್ಟಗೊಳಿಸುವ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ ವಿ ತೀರ್ಥರಾಮ ಉಪಸ್ಥಿತರಿದ್ದರು

ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here