ಆ.28: ಆಲೆಟ್ಟಿಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

0

 

ಆಲೆಟ್ಟಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮದ ವಿವಿಧ ಸಂಘಗಳ ಹಾಗೂ ಕಾರ್ಕಳ ಯಶಸ್ವಿ ನಾಗರಿಕ ಸೇವಾ ಸಂಘ ಇದರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಆ.28 ರಂದು ನಡೆಯಲಿರುವುದು. ಬೆಳಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ 1.00 ರ ತನಕ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುವುದು. ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ತರಬೇಕು. ಪ್ರಸಾದ್ ನೇತ್ರಾಲಯದ ತಜ್ಞ ವೈದ್ಯರಿಂದ ಪರೀಕ್ಷಿಸಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here