ಆ. 31: ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಗಣಹೋಮ, ಶ್ರೀ ದೇವಿಗೆ ವಿಶೇಷ ಅಲಂಕಾರ ಸೇವೆ

0

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಗಸ್ಟ್ ೩೧ ರಂದು ಗಣೇಶ್ ಚತುರ್ಥಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಗಣಹೋಮ ಮತ್ತು ಶ್ರೀ ದೇವಿಗೆ ವಿಶೇಷ ಅಲಂಕಾರ ಸೇವೆ ನಡೆಯಲಿರುವುದು. ಬೆಳಿಗ್ಗೆ ಗಣಪತಿ ಹವನ ಪ್ರಾರಂಭ, ಮಧ್ಯಾಹ್ನ ಪೂರ್ಣಾಹುತಿ, ಮಹಾಪೂಜೆ, ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿರುವುದು. ಮಧ್ಯಾಹ್ನ ನಂತರ ನವರಾತ್ರಿ ಉತ್ಸವ ಆಚರಣೆಯ ಬಗ್ಗೆ ಕ್ಷೇತ್ರದ ಕೂಡುಕಟ್ಟಿನ ಹಾಗೂ ಭಕ್ತಾದಿಗಳ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿರುವುದು. ವ್ಯವಸ್ಥಾಪನಾ ಸಮಿತಿ, ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿ, ಕೂಡುಕಟ್ಟಿನ ಸದಸ್ಯರೆಲ್ಲರೂ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ದೇವಳದ ಪ್ರಕಟಣೆ ತಿಳಿಸಿದೆ.