ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ‌ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸೈಂಟ್ ಜೋಸೆಫ್ ಅಂಗ್ಲ ಮಾಧ್ಯಮ ಪ್ರೌಢಶಾಲೆ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ,ಬಾಲಕಿಯರ ವಾಲಿಬಾಲ್ ಪಂದ್ಯಕೂಟದ ಉದ್ಘಾಟನ ಸಮಾರಂಭ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಅ.26 ರಂದು ನಡೆಯಿತು.

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ದೊಡ್ಡಣ್ಣ ಬರಮೇಲು ಕಾರ್ಯಕ್ರಮ ಉದ್ಘಾಟಿಸಿದರು.
ನಗರ ಪಂಚಾಯತ್ ವಾಲಿಬಾಲ್ ಕ್ರೀಡಾಂಗಣ ಉದ್ಘಾಟಿಸಿದರು.
ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಂಚಾಲಕ ರೆ.ಫಾ.ವಿಕ್ಟರ್ ಡಿಸೋಜ ಸಭಾಧ್ಯಕ್ಷತೆ ವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ದೈಹಿಕ ಶಿಕ್ಷಣ ಪರಿವೀಕ್ಷಕ ಸೂಪಿ ಪೆರಾಜೆ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಗ್ರೆಡ್ 1 ಅಧ್ಯಕ್ಷ ಗಣೇಶ್ ಏನೆಕ್ಕಲ್ಲು,ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಅಧ್ಯಕ್ಷ ವನಿತಾ ಸಂಪಾಜೆ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಗ್ರೇಡ್ 2 ಅಧ್ಯಕ್ಷ ಧನಂಜಯ, ಕ್ಷೇತ್ರ ಶಿಕ್ಷಣ ಸಮನ್ವಯಧಿಕಾರಿ ಚಂದ್ರಶೇಖರ, ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರೀಶ್ ರಾವ್,ಪ್ರಾಥಮಿಕ ವಿಭಾಗ ಅಧ್ಯಕ್ಷ ದುರ್ಗಾ ಪ್ರಸಾದ್, ಪೂರ್ವ ಪ್ರಾಥಮಿಕ ಅಧ್ಯಕ್ಷೆ ಡಾ.ಅನುರಾಧ ಕುರುಂಜಿ, ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಸ್ವಾಗತಿಸಿದರು.
ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಕಾರ್ಯಕ್ರಮ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವೇಣಿ ವಂದಿಸಿದರೂ.
ಉದ್ಘಾಟನೆ ಸಮಾರಂಭ ನಂತರ ಅತಿಥಿಗಳಿಗೂ ಹಾಗೂ ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರದರ್ಶನ ಪಂದ್ಯ ನಡೆಯಿತು.