ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಪುಸ್ತಕ ವಿತರಣೆ

0

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಅಡ್ಕಾರು ವನಸುಮ ವನವಾಸಿ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗಾರ್ಡನ್ ಆಸ್ಪತ್ರೆ ಸುಳ್ಯ ಇಲ್ಲಿನ ವೈದ್ಯಾಧಿಕಾರಿ ಡಾ. ಸಾಯಿಗೀತ ಜ್ಞಾನೇಶ್‌ರವರು ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿ ಆರೋಗ್ಯ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಅವಶ್ಯವಿದ್ದ ಔಷಧಿಗಳನ್ನು ಹಾಗೂ ಪುಸ್ತಕಗಳನ್ನು ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಾನ್ ವಿಲಿಯಂ ಲಸ್ರಾದೋ, ಜಯಂತ್ ರೈ, ಸುನೀತಾ ಡಿಸೋಜಾ, ರಂಗನಾಥ್ ಪಿ.ಎಂ. ಉಪಸ್ಥಿತರಿದ್ದರು.
ರೂಪಶ್ರೀ ಜೆ. ರೈ ಸಭಾಧ್ಯಕ್ಷತೆ ವಹಿಸಿದ್ದರು. ವನಸುಮ ವನವಾಸಿ ನಿಲಯದ ಸದಸ್ಯೆ ಶ್ರೀಮತಿ ಶ್ರೀದೇವಿ ನಾಗರಾಜ್ ಸ್ವಾಗತಿಸಿ, ವಂದಿಸಿದರು.