ಪಂಜ, ಸುಬ್ರಹ್ಮಣ್ಯ ವಲಯದ ಏನೆಕಲ್ಲು, ಸುಬ್ರಹ್ಮಣ್ಯ, ದೇವರಹಳ್ಳಿ, ಕುಲ್ಕುಂದ ಒಕ್ಕೂಟದ ಪದಗ್ರಹಣ

0

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪಂಜ, ಸುಬ್ರಹ್ಮಣ್ಯ ವಲಯದ ಏನೆಕಲ್ಲು, ಸುಬ್ರಹ್ಮಣ್ಯ, ದೇವರಹಳ್ಳಿ, ಕುಲ್ಕುಂದ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಆ. 25ರಂದು ಯೇನೆಕಲ್ಲಿನ ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಆದಿಶಕ್ತಿ ಭಜನಾ ಮಂದಿರದ ಅಧ್ಯಕ್ಷ ಗಿರಿಯಪ್ಪ ಗೌಡ ಬಾಲಾಡಿ ವಹಿಸಿದ್ದರು. ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರವನ್ನು ದಕ್ಷಿಣ ಕನ್ನಡ ಜಿಲ್ಲೆ 2ರ ನಿರ್ದೇಶಕ ಪ್ರವೀಣ್ ಕುಮಾರ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿಮಲಾ ರಂಗಯ್ಯ, ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ಮಾದನಮನೆ ,ತಾ.ಪಂ. ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ, ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾಗೇಶ್ ನೆಕ್ರಾಜೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕರಾದ ರಾಜೇಶ್, ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ, ಕುಲ್ಕುoದ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಉಮಾವತಿ, ಏನೇಕಲ್ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ವೀಣಾ, ಹಾಗೂ ಸುಬ್ರಮಣ್ಯ, ಪಂಜ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಪಂಜ ವಲಯದ ಮೇಲ್ವಿಚಾರಕಿ ಶ್ರೀಮತಿ ಪ್ರಿಯಾ ಸ್ವಾಗತಿಸಿ, ಏನೇಕಲ್ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ತಾರಾ ವಂದಿಸಿದರು. ನಾಲ್ಕೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಹರೀಶ್ಚಂದ್ರ ಕಾರ್ಯಕ್ರಮ ನಿರೂಪಿಸಿದರು.