ಆ.28: ಪಂಜದಲ್ಲಿ ಚಿತ್ರಕಲಾ ಸ್ಪರ್ಧೆ

0

 

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆ.28.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಪೂರ್ವಾಹ್ನ 10 ರಿಂದ ಜರುಗಲಿದೆ. ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಉದ್ಘಾಟಿಸಲ್ಲಿದ್ದಾರೆ. ಎಲ್ ಕೆ ಜಿ-ಯು ಕೆ ಜಿ ವಿದ್ಯಾರ್ಥಿಗಳಿಗೆ ಐಚ್ಚಿಕ, 2ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಪರಿಸರ, 5ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಗಣಪತಿ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಗಣೇಶೋತ್ಸವ , ಸಾರ್ವಜನಿಕರಿಗೆ ಸ್ವಚ್ಛ ಪ್ರಕೃತಿ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗಲಿದೆ. ಹೆಚ್ಚಿನ ಮಾಹಿತಿಗೆ ಸತೀಶ್ ಪಂಜ ಮೊಬೈಲ್ ಸಂಖ್ಯೆ 9591276526 ಸಂಪರ್ಕಿಸಲು ಉತ್ಸವ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.