ಬೆಳ್ತಂಗಡಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭಕ್ಕೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರಿಂದ ಚೆಕ್ ವಿತರಣೆ

0

ಗೌಡರಯಾನೆಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇವರು ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದ ಕಾರ್ಯಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರು ರೂ. 25,೦25 ನ್ನು ನೀಡಿದರು.


ಕಾರ್ಯಕ್ರಮದಲ್ಲಿ 2022 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟಕ್ಕಿಂತ ಹೆಚ್ಚಿನ ಹಂತಗಳಲ್ಲಿ ವಿಶೇಷ ಸಾಧನೆಗೈದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಈ ಸಂದರ್ಭದಲ್ಲಿ ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಲಹೆಗಾರರಾದ ಡಾ.ಉಜ್ವಲ್ ಊರುಬೈಲು, ಬೆಳ್ತಂಗಡಿ ಗೌಡ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಪದಾಧಿಕಾರಿಗಳಾದ ಪದ್ಮಗೌಡ ಬೆಳಾಲು, ಜಯಾನಂದ ಗೌಡ ಪ್ರಜ್ವಲ್, ಗೋಪಾಲಕೃಷ್ಣ ಗೌಡ, ಮೋಹನ್‌ಗೌಡ, ಆನಂದ ಗೌಡ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ, ಎ.ಓ.ಎಲ್.ಯ ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ ಉಪಸ್ಥಿತರಿದ್ದರು.