ಆ.31: ಕುಕ್ಕುಜಡ್ಕದಲ್ಲಿ 30 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

0

ಕುಕ್ಕುಜಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ‌.31 ರಂದು ಕುಕ್ಕುಜಡ್ಕ ದ.ಕ.ಜಿ.ಪ.ಹಿ.ಪ್ರಾ ಶಾಲೆಯ ವಠಾರದಲ್ಲಿ ನಡೆಯಲಿರುವುದು. ಬೆಳಗ್ಗೆ ಗಂಟೆ 8.00 ಕ್ಕೆ ಪುರೋಹಿತ ವೇದಮೂರ್ತಿ ರಾಧಾಕೃಷ್ಣ ಭಟ್ ಜೋಗಿಯಡ್ಕ ರವರ ನೇತೃತ್ವದಲ್ಲಿ ಗಣಪತಿ ದೇವರ ಪ್ರತಿಷ್ಠೆ ಯಾಗಿ ಗಣಪತಿ ಹವನ ನೆರವೇರಲಿರುವುದು. ಬಳಿಕ ಸಮರ್ಪಣ ಭಜನಾ ತಂಡ ಕುಕ್ಕುಜಡ್ಕ,‌ ಶ್ರೀ ಧರ್ಮಶಾಸ್ತಾ ಭಜನಾ ಮಂದಿರ ಪಿಲಿಕಜೆ, ‌ಪ್ರಸನ್ನಾಂಜನೇಯ ಭಜನಾ ಮಂಡಳಿ ಅಂಜನಾದ್ರಿ ಅಡ್ಕಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಗಲಿದೆ. ಸಂಜೆ ಗಂಟೆ 4.00 ರಿಂದ ಗಣೇಶನ ವೈಭವದ ಶೋಭಾಯಾತ್ರೆಯು ಪ್ರಮುಖ ಬೀದಿಗಳಲ್ಲಿ ಸಾಗಿ ಜಲಸ್ಥಂಭನವಾಗಲಿರುವುದು.