ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

0

ಆ.26 ರಂದು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ,ಸುದ್ದಿ ಸಮೂಹ ಮಾಧ್ಯಮ ಸುಳ್ಯ ಮತ್ತು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಸಮಿತಿ, ಸುಳ್ಯ ಇದರ ಸದಸ್ಯ ಕಾರ್ಯದರ್ಶಿಯಾದ ಕು.ಅರ್ಪಿತಾ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟ ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರಿಗೆ ಧನ್ಯವಾದ ತಿಳಿಸಿ, ಈ ಕಾರ್ಯಕ್ರವನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ  ಕೆ. ಕೃಷ್ಣಮೂರ್ತಿ ಅವರು ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಕೀಲರ ಸಂಘ ಸುಳ್ಯ ಇದರ ಅಧ್ಯಕ್ಷರಾದ   ನಾರಾಯಣ ಕೆ ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರಾದ  ಜನಾರ್ಧನ ಬಿ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.