ಆ.26 ರಂದು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ,ಸುದ್ದಿ ಸಮೂಹ ಮಾಧ್ಯಮ ಸುಳ್ಯ ಮತ್ತು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಸಮಿತಿ, ಸುಳ್ಯ ಇದರ ಸದಸ್ಯ ಕಾರ್ಯದರ್ಶಿಯಾದ ಕು.ಅರ್ಪಿತಾ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟ ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರಿಗೆ ಧನ್ಯವಾದ ತಿಳಿಸಿ, ಈ ಕಾರ್ಯಕ್ರವನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಕೆ. ಕೃಷ್ಣಮೂರ್ತಿ ಅವರು ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.