ಸೆ.5: ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನವೀಕರಣ ಕಟ್ಟಡ ಮತ್ತು ನೂತನ ಸಭಾಭವನದ ಉದ್ಘಾಟನಾ ಕಾರ್ಯಕ್ರಮ

0

 

ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನವೀಕರಣಗೊಂಡ ಕಟ್ಟಡ ಹಾಗೂ ನೂತನ ಸಭಾಭವನದ ಉದ್ಘಾಟನಾ ಕಾರ್ಯಕ್ರಮದ ಸಮಾರಂಭ ಸಂಘದ ಅಧ್ಯಕ್ಷೆ ಶ್ರೀಮತಿ ಪಾರ್ವತಿ ನೇಣಾರು ರವರ ಅಧ್ಯಕ್ಷತೆಯಲ್ಲಿ ಸೆ.5 ರಂದು ಚೊಕ್ಕಾಡಿ ಶ್ರೀ ರಾಮ ದೇವಾಲಯದ ದೇಸಿ ಭವನದಲ್ಲಿ ನಡೆಯಲಿರುವುದು.
ನೂತನ ಸಭಾಭವನವನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ,ಸುಳ್ಯ ಶಾಸಕ ಎಸ್.ಅಂಗಾರ ರವರು ಉದ್ಘಾಟಿಸಲಿರುವರು. ನವೀಕೃತ ಕಟ್ಟಡವನ್ನು ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಉದ್ಘಾಟಿಸಲಿದ್ದಾರೆ. ದ.ಕ.ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ಕೆ ನಾಮಫಲಕ ಅನಾವರಣಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟದ ನಿರ್ದೇಶಕಿ ಸವಿತಾ ಎನ್.ಶೆಟ್ಟಿ, ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯಾ ಮೇಲ್ತೋಟ, ಸುಳ್ಯ ಯೋಜನಾಧಿಕಾರಿ ನಾಗೇಶ್ ಪಿ, ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ, ಉಪವ್ಯವಸ್ಥಾಪಕ ಡಾ| ಸತೀಶ್ ರಾವ್ ಉಪಸ್ಥಿತರಿರುತ್ತಾರೆ.