ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ರಸಪ್ರಶ್ನೆಗೆ ಆಯ್ಕೆ

0

 

ಕರ್ನಾಟಕ ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಪ್ರಯುಕ್ತ ಜವಾಹರಲಾಲ್ ನೆಹರು ತಾರಾಲಯದ ವತಿಯಿಂದ ನಡೆಸಲಾದ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಆರಂತೋಡು ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.

ಮೈಸೂರಿನಲ್ಲಿ ನಡೆದ ಎರಡನೇ ಹಂತದ ರಸಪ್ರಶ್ನೆ ಸ್ಪರ್ಧೆಯಲ್ಲಿ ಆರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 10 ನೇ ತರಗತಿಯ ಆಕಾಶ್ ಏನ್ ಎಸ್ ಭಟ್ ಮತ್ತು ಮನೀಶ್ ವಿಜಯಿಯಾಗಿ ಮೂರನೇ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.