ಮಂಗಳೂರಿನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಸುಳ್ಯದ ನ್ಯಾಯವಾದಿಗಳು ಭಾಗಿ

0

 

ಮಂಗಳೂರಿನ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘದ ಆಶ್ರಯದಲ್ಲಿ ಅಗಸ್ಟ್ 26ರಂದು ಡಿ ಎಲ್ ಎಸ್ ಎ ಪ್ಯಾನಲ್ ವಕೀಲರಿಗೆ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ಈ ಕಾರ್ಯಕ್ರಮವನ್ನು ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಎಂ ಜೋಶಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ವಹಿಸಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಿಗೆ ತರಬೇತಿ ಕಾರ್ಯಾಗಾರದಲ್ಲಿ ಸುಳ್ಯದ ವಕೀಲರುಗಳಾದ ಭಾಸ್ಕರ್ ರಾವ್, ಎಂ ಎಂ ಬೊಳ್ಳಪ್ಪ, ಅಬೂಬಕ್ಕರ್ ಅಡ್ಕಾರ್ ಜೆ ಎನ್, ಹರೀಶ್ ಬೂಡುಪನ್ನೆ, ಪುಷ್ಪರಾಜ್ ಗಾಂಭೀರ್, ರಾಮಚಂದ್ರ ಶ್ರೀಪಾದ ಹೆಗಡೆ, ರಾಜೇಶ್, ನಾರಾಯಣ ಜಟ್ಟಿಪಳ್ಳ,ಚರಣ್, ನಿರ್ಮಲ, ಪ್ರತಿಭಾ ಜ್ಯೋತಿ, ಲೋಲಾಕ್ಷಿ ಭಾಗವಹಿಸಿದ್ದರು.
ತಾಲೂಕಿನ ಪ್ಯಾನೆಲ್ ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜೆ. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ ಡಿ.ಎಸ್. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತರಬೇತಿ ಕಾರ್ಯಗಾರವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಿತು.