ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಳಲಂಬೆ ವತಿಯಿಂದ 19 ನೇ ವರ್ಷದ ಗಣೇಶೋತ್ಸವ

0

ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಳಲಂಬೆ ಇದರ ವತಿಯಿಂದ ಆ. 31 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ನಡೆಯಲಿರುವುದು.
ಬೆಳಗ್ಗೆಗಂಟೆ 9-00ಕ್ಕೆ ಗಣಪತಿ ಪ್ರತಿಷ್ಠೆ, ಬಳಿಕ ಸಾಮೂಹಿಕ ಗಣಪತಿ ಹೋಮ ನಡೆಯಲಿದೆ. ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವುದು ಕಾರ್ಯಕ್ರಮವು ನಡೆಯಲಿದೆ.
ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು
ಪುರುಷರಿಗೆ ಭಕ್ತಿಗೀತೆ, ಹಗ್ಗಜಗ್ಗಾಟ, ಮಹಿಳೆಯರಿಗೆ ಭಕ್ತಿಗೀತೆ, ಬಾಲ್ ಪಾಸಿಂಗ್, ಹಗ್ಗಜಗ್ಗಾಟ,
ಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ದೇಶ ಭಕ್ತಿಗೀತೆ, ಭಕ್ತಿಗೀತೆ, ಗಣೇಶನ ಚಿತ್ರ ಬಿಡಿಸುವುದು ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.