ಕೋಟೆಮುಂಡುಗಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 31 ನೇ ವರ್ಷದ ಶ್ರೀ ಗಣೇಶೋತ್ಸವ

0

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ವತಿಯಿಂದ 31 ನೇ ವರ್ಷದ ಶ್ರೀ ಗಣೇಶೋತ್ಸವ ದ.ಕ.ಜಿ.ಪ.ಹಿ.ಪ್ರಾ.ಶಾಲೆ ವಠಾರದಲ್ಲಿ ಆ.31 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 9-00 ಕ್ಕೆ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು ಬಳಿಕ ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆಮುಂಡುಗಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ಗಂಟೆ 10-00 ರಿಂದ ಗಣಪತಿ ಹವನ ಬೆಳಿಗ್ಗೆ ಗಂಟೆ 11-00 ಕ್ಕೆ ಅಕ್ಷರಾಭ್ಯಾಸ ನಡೆಯಲಿದೆ. ಮಧ್ಯಾಹ್ನ ಗಂಟೆ 12-30 ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಬಹುಮಾನ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 3-30 ಕ್ಕೆ ಮಹಾಪೂಜೆ ನಡೆಸಿ ಪ್ರಸಾದ ವಿತರಣೆ ಸಂಜೆ ಗಂಟೆ 4-00 ರಿಂದ ಶೋಭಾಯಾತ್ರೆ ನಡೆದು ಅಯ್ಯನಕಟ್ಟೆ ಹೊಳೆಯಲ್ಲಿ ಮೂರ್ತಿವಿಸರ್ಜನೆ ನಡೆಯಲಿದೆ.
ಗಣೇಶೋತ್ಸವದ ಅಂಗವಾಗಿ ಅಂಗನವಾಡಿ ಮಕ್ಕಳಿಗೆ , ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.