ರೋಟರಿ  ವಿದ್ಯಾಸಂಸ್ಥೆಯಲ್ಲಿ   ದೇಶ ಭಕ್ತಿಗೀತೆ ಗಾಯನ ಸ್ಪರ್ಧೆ

0

 

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವತಿಯಿಂದ ತಾಲೂಕು ಮಟ್ಟದ ಗೀತಾ ಗಾಯನ ಸ್ಪರ್ಧೆ  ಅ.  27 ರಂದು ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶಶಿಧರ್ ಎಂ. ವಹಿಸಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರೇಮಲತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಸುಳ್ಯದ ಅಧ್ಯಕ್ಷ  ಚಂದ್ರಶೇಖರ್ ಪೇರಾಲ್, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಗಳ ಸಂಚಾಲಕ  ಗಿರಿಜಾಶಂಕರ್ ತುದಿಯಡ್ಕ ಶುಭ ಹಾರೈಸಿದರು.

 

ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು. ಕೆ., ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಮಾಧವ ಮಡಪ್ಪಾಡಿ,  ಬಾಪು ಸಾಹೇಬ್, ಮಹಾಲಕ್ಷ್ಮಿ ಕೊರಂಬಡ್ಕ , ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀ ಮತಿ ವೀಣಾ ಶೇಡಿಕಜೆ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತರಾದ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶ್ರೀ ಯುತ ಲಕ್ಷ್ಮೀಶ ರೈ.ಯವರನ್ನು ಸನ್ಮಾನಿಸಿ ,ಗೌರವಿಸಲಾಯಿತು.
ಶ್ರೀಮತಿ ಪೂರ್ಣಿಮಾ ಮಡಪ್ಪಾಡಿ, ಶ್ರೀಮತಿ ಗಿರಿಜಾ, ಹಾಗೂ ಶ್ರೀಮತಿ ರೇಖಾ ಶೇಟ್ ನಿರ್ಣಾಯಕರಾಗಿ ಸಹಕರಿಸಿದರು.


ಸ್ಥಳೀಯ ಸಂಸ್ಥೆಯ ಖಜಾಂಜಿ ರೇವತಿ ಪಿ. ಸ್ವಾಗತಿಸಿ,   ಲಿಂಗಪ್ಪ ಬೆಳ್ಳಾರೆ ವಂದಿಸಿದರು. ರೋಟರಿ ವಿದ್ಯಾಸಂಸ್ಥೆ ಗೈಡ್ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.