ಅಡ್ಕಾರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ ಹಾಗೂ ಭಜನಾ ಸೇವೆ

0

 

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರದ ಪ್ರಯುಕ್ತ ಬಲಿವಾಡು ಕೂಟ, ಭಜನಾ ಸೇವೆಯು ಆ.27ರಂದು ಜರುಗಿತು.


ಸೋಣ ಶನಿವಾರದ ಪ್ರಯುಕ್ತ ದೇವಾಲಯದ ಪ್ರಧಾನ ಅರ್ಚಕ ಈಶ್ವರ ಭಟ್ ಅವರ ನೇತೃತ್ವದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ, ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂಡಳಿಯವರಿಂದ ಭಜನಾ ಸೇವೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.
ಈ ಸಂದರ್ಭದಲ್ಲಿ ದೇವಾಲಯದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು , ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.