ಆ.31 ಮತ್ತು ಸೆ.01: ಬೆಳ್ಳಾರೆ ಸಾರ್ವಜನಿಕ ಸಾಂಸ್ಜೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ ಶ್ರೀ ಗಣೇಶೋತ್ಸವ

0

ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 51 ವರ್ಷದ ಗಣೇಶೋತ್ಸವವು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆ.31 ಮತ್ತು ಸೆ.01 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 8.00 ಕ್ಕೆ ಶ್ರೀ ಗಣಪತಿ ಪ್ರತಿಷ್ಠೆ, ವಿವಿಧ ಸ್ಪರ್ಧೆಗಳು, ಗಣಪತಿ ಹವನ ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ವೈಯಕ್ತಿಕ ರಂಗಪೂಜೆ ಪ್ರಾರಂಭವಾಗಲಿದೆ.
ಸಂಜೆ ಧಾರ್ಮಿಕ ಸಭೆ ನಡೆಯಲಿದೆ.
ರಾತ್ರಿ ಗಂಟೆ 8.00 ಕ್ಕೆ ಸಾಮೂಹಿಕ ಸರ್ವ ದೀಪಾಲಂಕಾರ ಸಹಿತ ರಂಗಪೂಜೆ,ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ 9.30 ಕ್ಕೆ ಸಾಂಸ್ಜೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ಅಧ್ಯಕ್ಷ ಮನೋಜ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಗುರುಪುರ ಕೈಕಂಬದ ಶ್ರೀ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಹಲವು ಜನ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾತ್ರಿ ಗಂಟೆ 10.00 ರಿಂದ “ಅಜ್ಜ ಅಜ್ಜ ಕೊರಗಜ್ಜ” ಯಕ್ಷಗಾನ ಬಯಲಾಟ ನಡೆಯಲಿದೆ.
ಸೆ.01 ರಂದು ಬೆಳಿಗ್ಗೆ ಶ್ರೀ ಗಣಪತಿ ಪೂಜೆ,ಶ್ರೀ ಗಣಪತಿ ಹವನ ,ಶ್ರೀ ಸತ್ಯಗಣಪತಿ ವ್ರತ ಪೂಜೆ, ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಮದ್ಯಾಹ್ನ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.ಸಂಜೆ ಮಹಾಪೂಜೆ,ಮಂಗಳಾರತಿ,ಪ್ರಸಾದ ವಿತರಣೆ ನಡೆದ ಬಳಿಕ ವಿಜೃಂಭಣೆಯ ಶೋಭಾಯಾತ್ರೆ ನಡೆಯಲಿದೆ.