ಬೇರ್ಯ ಪೂಜಾ ಲಕ್ಷ್ಮಣ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

0

 

ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಹಾಗೂ ಸೃಷ್ಟಿ ಶಕ್ತಿ ಸಂಸ್ಥೆ (ರಿ)ಯ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದಲ್ಲಿ ಕರ್ನಾಟಕ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸುಳ್ಯ ತಾಲೂಕಿನ ಪಲ್ಲೊಡಿಯ ಮಾಜಿ ಸೈನಿಕ ಲಕ್ಷ್ಮಣ ಬೇರ್ಯ ಹಾಗೂ ರಾಜಶ್ರೀ ಇವರ ಮಗಳು ಪೂಜಾ ಲಕ್ಷ್ಮಣ ಆಯ್ಕೆ ಆಗಿದ್ದು, ಇಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಭಾಂಗಣ, ಚಾಮರಾಜ ಪೇಟೆ, ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ವೈಭವ ಕಾರ್ಯಕ್ರಮದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಪೂಜಾ ಲಕ್ಷ್ಮಣ ಇವರಿಗೆ ನಾಡಿನ ಮಂತ್ರಿಗಳ ಹಾಗೂ ಗಣ್ಯರ ಸಮ್ಮುಖದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.