ಜಾಲ್ಸೂರಿನಲ್ಲಿ ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಸ್ವಾಗತಿಸಿದ ಗ್ರಾಮಸ್ಥರು

0

 

ವಿನೋಬನಗರದಲ್ಲಿ ಮಂಡೆಕೋಲು ಗ್ರಾಮಸ್ಥರಿಂದ ಸ್ವಾಗತ

ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರತಿಮೆಗೆ ಪುಷ್ಪಾರ್ಚನೆ

ಮಂಗಳೂರಿನ ಬಾವುಟ ಗುಡ್ಡದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿರುವ ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಜಾಲ್ಸೂರಿಗೆ ತಲುಪಿದಾಗ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.


ಇದಕ್ಕೂ ಮೊದಲು ಕಂಚಿನ ಪ್ರತಿಮೆಯು ವಿನೋಬನಗರದ ದ್ವಾರದ ಬಳಿ ತಲುಪಿದಾಗ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಡೆಕೋಲು ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಗ್ರಾ.ಪಂ. ಸದಸ್ಯ ಬಾಲಚಂದ್ರ ದೇವರಗುಂಡ, ಜಯರಾಜ್ ಕುಕ್ಕೇಟಿ, ಕುಕ್ಕೇಟಿ ಕುಶಾಲಪ್ಪ ಗೌಡ ನೇತೃತ್ವದಲ್ಲಿ ಮಂಡೆಕೋಲು ಗ್ರಾಮಸ್ಥರು ಸ್ವಾಗತಿಸಿ, ಬರಮಾಡಿಕೊಂಡರು.
ಅಲ್ಲಿಂದ ಮುಂದೆ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಬಳಿ ಶಾಲಾ ವಿದ್ಯಾರ್ಥಿಗಳು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಶಾಲಾ ಸಂಚಾಲಕ ಸುಧಾಕರ ಕಾಮತ್, ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು.
ಜಾಲ್ಸೂರಿಗೆ ಆಗಮಿಸಿದಾಗ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರದ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಉಪಸ್ಥಿತರಿದ್ದು, ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.