ಸುಳ್ಯ ಸೈಂಟ್ ಜೋಸೆಫ್ ಶಾಲೆಯ ಅವನಿ ಎಂ.ಎಸ್. ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

 

 

ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಸಂಸ್ಥೆಯವರು ನಡೆಸಿದ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ – 2022 ರಲ್ಲಿ ಸುಳ್ಯ ಸೈಂಟ್ ಜೋಸೆಫ್ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಅವನಿ ಎಂ.ಎಸ್ ರವರು ಭಾಗವಹಿಸಿ ರಿದಮಿಕ್ ವಿಭಾಗದ ಸಬ್ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಮತ್ತು ಟ್ರೆಡಿಶನಲ್ ವಿಭಾಗದ ಸಬ್ ಜ್ಯೂನಿಯರ್ ವಿಭಾಗದಲ್ಲಿ 4 ನೇ ಸ್ಥಾನವನ್ನು ಪಡೆಯುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅವರನ್ನು ಶಾಲಾ ವತಿಯಿಂದ ಶಾಲಾ ಸಂಚಾಲಕರಾದ ಫಾ.ವಿಕ್ಟರ್ ಡಿ ಸೋಜಾ ,ಮುಖ್ಯೋಪಾಧ್ಯಾಯಿನಿ ಸಿ.ಬಿನೋಮರವರು ಗೌರವಿಸಿದರು.