ಕನಕಮಜಲು: ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಅದ್ಧೂರಿ ಸ್ವಾಗತ

0

 

ಗ್ರಾಮದ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ – ಪುಷ್ಪಾರ್ಚನೆ

ಮಂಗಳೂರಿನ ಬಾವುಟಗುಡ್ಡದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಆಂದ್ರಪ್ರದೇಶದ ವಿಜಯವಾಡದಿಂದ ಸುಳ್ಯ ರಸ್ತೆಯ ಮೂಲಕ ಮಂಗಳೂರಿಗೆ ತೆರಳುವ ವೇಳೆ ಆ.29ರಂದು ಕನಕಮಜಲಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ, ಬೀಳ್ಕೊಡಲಾಯಿತು.


ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಸೇರಿದಂತೆ ಗ್ರಾಮದ ಸಮಸ್ತರು ಸೇರಿ ಅದ್ಧೂರಿಯಾಗಿ ಸ್ವಾಗತಿಸಿ, ಬರಮಾಡಿಕೊಂಡರು.
ಗ್ರಾಮದ ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ , ಆರತಿ ಬೆಳಗಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.


ಕನಕಮಜಲು ಗ್ರಾಮಕ್ಕೆ ಪ್ರತಿಮೆಯು ತಲುಪುತ್ತಿದ್ದಂತೆ ಚೆಂಡೆ ಹಾಗೂ ಸಿಡಿಮದ್ದಿನ ಅಬ್ಬರದೊಂದಿಗೆ ಗ್ರಾಮಸ್ಥರು ಸೇರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಮಸ್ತ ಕನಕಮಜಲು ಗ್ರಾಮದ ನಾಗರಿಕರು ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.