ಸಚಿವ ಎಸ್. ಅಂಗಾರರಿಂದ ತಾಲೂಕು ಅಂಬೇಡ್ಕರ್ ಭವನದ ಕಾಮಗಾರಿ ಪರಿಶೀಲನೆ

0

 

ಸುಳ್ಯದ ಅಂಬಟೆಡ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ತಾಲೂಕು ಅಂಬೇಡ್ಕರ್ ಭವನದ ಕಾಮಗಾರಿಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಆ.29ರಂದು ಪರಿಶೀಲನೆ ನಡೆಸಿದರು.

 

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಕು. ಭಾಗೀರಥಿ ಮುರುಳ್ಯ, ಗುತ್ತಿಗೆದಾರ ಯೋಗೀಶ್ ಪೂಜಾರಿ ಉಪಸ್ಥಿತರಿದ್ದರು.
ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರೆಂದು ತಿಳಿದುಬಂದಿದೆ.