ಸುಬ್ರಹ್ಮಣ್ಯ  ಕೆ ಎಸ್ ಎಸ್ ಕಾಲೇಜು : ಪ್ರತಿಭಾ ಪುರಸ್ಕಾರ

0

ಕೆ ಎಸ್ ಎಸ್ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.25ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಇದರ ಪ್ರಾಂಶುಪಾಲ ಚಂದ್ರಶೇಖರ ಕೆ ಭಾಗವಹಿಸಿದ್ದರು. ವೇದಿಕೆಯಲ್ಲಿ ಕೆ ಎಸ್ ಎಸ್ ಕಾಲೇಜಿನ ಪ್ರಾಂಶುಪಾಲ ದಿನೇಶ್ ಪಿ.ಟಿ, , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ ಕೆ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷಿತ್ ಹೆಚ್, ಪ್ರಾಕ್ತನ ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಶ್ರೀಕುಮಾರ್, ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು। ಶ್ರಾವ್ಯ ಸಿ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶ್ರೀಲತಾ ಕಮೀಲ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಉದಯಕುಮಾರ್ ವಂದಿಸಿದರು. ಮನೋಹರ ಹಾಗೂ ಆರತಿ ಕೆ ಕಾರ್ಯಕ್ರಮ ನಿರೂಪಿಸಿದರು.