ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ನಿಂತಿಕಲ್ಲು ಕೆ.ಎಸ್.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

0


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ ಇದರ ವತಿಯಿಂದ ಆ. ೨೯ರಂದು ಸ..ಹಿ.ಪ್ರಾ.ಶಾಲೆ ಕಲ್ಮಡ್ಕ ಇಲ್ಲಿ ನಡೆದ ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕೆ.ಎಸ್.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.