ನೆಟ್ಟಾರು:ನಿವೃತ್ತ ಪ್ರಾಂಶುಪಾಲ ನೆಟ್ಟಾರು ಗಣಪತಿ ಭಟ್ ನಿಧನ

0
671

ಬೆಳ್ಳಾರೆ ಗ್ರಾಮದ ನೆಟ್ಟಾರು ಮನೆ ಗಣಪತಿ ಭಟ್ ಆ.30 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಅವರಿಗೆ ಸುಮಾರು 76ವರ್ಷ ವಯಸಾಗಿತ್ತು. ನಿನ್ನೆ ದಿಢೀರನೆ ಎದೆನೋವು ಕಾಣಿಸಿಕೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿದ್ದರು.ಹಲವಾರು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಅಪಾರ ಶಿಷ್ಯ ಬಳಗವನ್ನು ಹೊಂದಿದ್ದರು.
ಇವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here