ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಜನ್ಮದಿನೋತ್ಸವ

0

 

ಗುತ್ತಿಗಾರು ಗ್ರಾಮ ಪಂಚಾಯತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇವರ ಸಹಯೋಗದೊಂದಿಗೆ ಆ.30 ರಂದು ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು.

ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಮಕ್ಕಳು ಬಿಡಿಸಿದ ರಂಗನಾಥನ್ ಅವರ ಚಿತ್ರಗಳ ಪ್ರದರ್ಶನದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ನಿವೃತ್ತ ಶಿಕ್ಷಕರು, ಜನಪದ ಸಂಶೋಧಕ ರುದ್ರಚಾಮುಂಡಿ ಕುಶಾಲಪ್ಪ ಗೌಡರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಶ್ರೀಮತಿ ಗಾಯತ್ರಿ, ಗುತ್ತಿಗಾರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಬಿ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧಿಕಾರಿ ದಯಾನಂದ ಆಳ್ವ , ಗ್ರಾಮ ಪಂಚಾಯತ್ ಸದಸ್ಯೆ ಲತಾ ಕುಮಾರಿ ಆಜಡ್ಕ ಉಪಸ್ಥಿತರಿದ್ದರು.

ವಿಜಿತ್ ಎಂ.ಜಿ ವಳಲಂಬೆ ಶಾಲೆ, ದೃತಿ ಎಂ.ಜೆ ನಡುಗಲು ಶಾಲೆ ಮತ್ತು ಕನ್ನಿಕಾ ಕೆ ಜಿ ಗುತ್ತಿಗಾರು ಪ್ರೌಢಶಾಲೆಯ ವಿದ್ಯಾರ್ಥಿಗಳು ಗ್ರಂಥಾಲಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ಉತ್ತಮ ರೀತಿಯಲ್ಲಿ ವ್ಯಕ್ತಪಡಿಸಿ ಅತಿಥಿಗಳಿಂದ ಪ್ರಶಂಸೆಗೆ ಭಾಜನರಾಗಿದರು.
ಆಗಸ್ಟ್ 9 ರಂದು ನಡೆದ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತರಾದ 35 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ಮತ್ತು ಪುಸ್ತಕ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಎ.ಕೆ ಹಿಮಕರ, ಸುಳ್ಯ ತಾಲೂಕು ಗ್ರಂಥಾಲಯ ಮೇಲ್ವಿಚಾರಕ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಕಣೆಮರಡ್ಕ , ಹರಿಹರ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಚಂದ್ರಿಕಾ , ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಮಮತಾ, ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಶಿಕ್ಷಕರು, ಪೋಷಕರು ಪಂಚಾಯತ್ ಸಿಬ್ಬಂದಿ ವರ್ಗದವರು , ಅಮರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರ್ದೇಶಕರಾದ ಯೋಗೀಶ್ ಹೊಸೊಳಿಕೆ ಮತ್ತು ಶ್ರೀಮತಿ ಅಭಿಲಾಷ ಮೋಟ್ನೂರು ಇವರನ್ನು ಮುಖ್ಯ ಗ್ರಂಥಾಲಯ ಅಧಿಕಾರಿಯವರು ಈ ಸಂದರ್ಭದಲ್ಲಿ ಅಭಿನಂದಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ಯೋಗೀಶ್ ಹೊಸೊಳಿಕೆ ಸ್ವಾಗತಿಸಿದರು.ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದಿವ್ಯ ಸುಜನ್ ಗುಡ್ಡೆಮನೆ ಪ್ರಾರ್ಥಿಸಿ , ಪಂಚಾಯಿತಿ ಸಿಬ್ಬಂದಿ ಚೋಮಯ್ಯ ಬಿ ಸ್ಪರ್ಧಾ ವಿಜೇತರ ವಿವರವನ್ನು ವಾಚಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಅಭಿಲಾಷ ಮೋಟ್ನೂರು ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ ಧನ್ಯವಾದ ಸಮರ್ಪಿಸಿದರು.