ಚೊಕ್ಕಾಡಿ ಪ್ರೌಢಶಾಲೆಯಲ್ಲಿ ವನಸಿರಿ ಕಾರ್ಯಕ್ರಮ

0

 

ರೋಟರಿ ಕ್ಲಬ್ ಸುಳ್ಯ, ಫ್ರೆಂಡ್ಸ್ ಕ್ಲಬ್ ಪೈಲಾರು,ಬಾಬಾ ಇಕೋ ಕ್ಲಬ್, ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ, ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕ ಇವುಗಳ ಜಂಟಿ ಸಹಯೋಗದಲ್ಲಿ ವನಸಿರಿ ಕಾರ್ಯಕ್ರಮ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ಆ‌.30 ರಂದು ನಡೆಯಿತು.
ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ಉಳಿಸಿ ಬೆಳೆಸುವ ಉದ್ದೇಶದಿಂದ ಕೈಗೊಂಡಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ಹರ್ಷವರ್ಧನ ಬೊಳ್ಳೂರು,ಫ್ರೆಂಡ್ಸ್ ಕ್ಲಬ್ ನ ಉಪಾಧ್ಯಕ್ಷ ಭುವನೇಶ್ವರ ಪೈಲಾರು, ಜತೆ ಕಾರ್ಯದರ್ಶಿ ಜೈದೀಪ್ ಕಡಪಳ,ನಿರ್ದೇಶಕ ಅವಿನ್ ಕೆರೆಮೂಲೆ,ಚೊಕ್ಕಾಡಿ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು,ಸಿಬ್ಬಂದಿ ವರ್ಗ ಮತ್ತು ಬಾಬಾ ಇಕೋ ಕ್ಲಬ್ ನ ಸದಸ್ಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.ತೇಜಸ್ವಿ ಕಡಪಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.