ಪಂಜ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

 

ಪಂಜ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಆ.29ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು.

 

ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಹಾಗೂ ಕಾರ್ಯದರ್ಶಿ ಕೆ. ಪದ್ಮಯ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸರ್ವ ಸದಸ್ಯರುಗಳು ಸಭೆಯಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ. ರಾಮಯ್ಯ ಭಟ್ ರವರು ಗ್ರಾಮ ಪಂಚಾಯತ್ ಗೆ ನೂತನವಾಗಿ ವರ್ಗಾವಣೆಗೊಂಡು ಬಂದಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಸ್ವಾಗತಿಸಿ ಶುಭ ಹಾರೈಸಿದರು.