ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣಪತಿ ಹೋಮ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ.31 ರಂದು ವರ್ಷಂಪ್ರತಿಯಂತೆ ಈ ವರ್ಷವೂ ಸಾರ್ವಜನಿಕ ಶ್ರೀ ಗಣಪತಿ ಹೋಮ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ಮತ್ತು ಸಮಿತಿ ಸದಸ್ಯರು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಮಾಧವ ಭಟ್ ಶೃಂಗೇರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.