ಹಳೆಗೇಟು ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

0

 

 

ಸಾಂಸ್ಕೃತಿಕ ಸಂಘ ಹಳೆಗೇಟು ಇದರ ಆಶ್ರಯದಲ್ಲಿ 39 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆ.31 ರಂದು ಸಮಿತಿ ಅಧ್ಯಕ್ಷ ಬಿ.ಶ್ರೀನಿವಾಸ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯರಾದ ಲೋಕಯ್ಯ ಗೌಡ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಎಂ. ಬಾಲಗೋಪಾಲ ಸೇರ್ಕಜೆ, ನ.ಪಂ.ಸದಸ್ಯ ಬುದ್ಧ ನಾಯ್ಕ್ ಹಳೆಗೇಟು, ಕಾರ್ಯದರ್ಶಿ
ವಿಶ್ವನಾಥ ರಾವ್,ಜತೆ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಚಿತ್ತರಂಜನ್ ಯು,
ಸಂಚಾಲಕ ದಿವಾಕರ್ ಎಂ, ಕಿಶನ್ ಕುಮಾರ್, ಉಮೇಶ್ ಆಚಾರ್ಯ ಉಪಸ್ಥಿತರಿದ್ದರು.
ಬಳಿಕ ಸಾಂಸ್ಕೃತಿಕ ಕಲಾ ವೇದಿಕೆಯಲ್ಲಿ ಲೋಕೇಶ್ ಊರುಬೈಲು ನಿರ್ದೇಶನದ ಸುಳ್ಯ ರಂಗಮಯೂರಿ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಹಾಗೂ ಯಕ್ಷಗುರು ವಾಸುದೇವ ರೈ ಬೆಳ್ಳಾರೆ ಯವರ ನಿರ್ದಶನದ ಚಂದ್ರಹಾಸ ಎಂಬ ಕನ್ನಡ ಮಕ್ಕಳ ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು. ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.