ಮುಖ್ಯ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿ ನಿವೃತ್ತಿ

0

 

ಕೂತ್ಕುಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 7 ವರ್ಷಗಳಿಂದ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ
ಚಂದ್ರಶೇಖರ ಕುಕ್ಕುಪುಣಿಯವರು ಆ. 31 ರಂದು ನಿವೃತ್ತಿ ಗೊಂಡಿರುತ್ತಾರೆ. ಅವರು ಅಂಬಾಡಿ ಪಾಟಾಳಿ ಮತ್ತು ಗಂಗಮ್ಮ ದಂಪತಿಗಳ ಪುತ್ರ. ಪಂಬೆತ್ತಾಡಿ, ಪಾಂಡಿಗದ್ದೆ, ಕೂತ್ಕುಂಜ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿ ಕೂತ್ಕುಂಜ ಶಾಲೆಗೆ ವರ್ಗಾವಣೆಗೊಂಡಿದ್ದರು.

ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕವನ್ನು ಗಳಿಸಿರುತ್ತಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ. ಅನೇಕ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಉತ್ತಮ ಯೋಗ ತರಬೇತುದಾರರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿರುತ್ತಾರೆ.