ಸುಳ್ಯ ತಾಲೂಕು ಪ್ರೌಢಶಾಲಾ ವಿಜ್ಞಾನ ನಾಟಕ ಸ್ಪರ್ಧೆ

0

 

ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಪ್ರಥಮ

ಶಾಲಾ ರಕ್ಷಣಾ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇವರು ಆಯೋಜಿಸಿದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪ್ರಥಮ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಅರಂತೋಡು ಎನ್ ಎಂ ಪಿ ಯು ಸಿ ನಿವೃತ್ತ ಮುಖ್ಯ ಗುರು ಆನಂದ ಗೌಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗ ಶಿಕ್ಷಣ ಸಂಯೋಜಕ ಶ್ರೀಮತಿ ಸಂಧ್ಯಾ ಕುಮಾರಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ ಎಸ್ ಚಂದ್ರಶೇಖರ್, ವಿಜ್ಞಾನ ನಾಟಕ ಸ್ಪರ್ಧೆಯ ತೀರ್ಪುಗಾರರಾದ ದಿನೇಶ್ ಉಪಸ್ಥಿತರಿದ್ದರು.
ಶ್ರೀಮತಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ರೇಣುಕಾ ವಂದಿಸಿದರು.