ಉಬರಡ್ಕದಲ್ಲಿ ಸಾರ್ವಜನಿಕ ಗಣೇಶೋತ್ಸವ

0

 

 

ಶ್ರೀ ನರಸಿಂಹ ಶಾಸ್ತಾವು ದೇವಾಲಯ, ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ಉಬರಡ್ಕ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಂಗಣದಲ್ಲಿ ಆ.31 ರಂದು ನಡೆಯಿತು. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಸ್ಥಳೀಯರಿಂದ ಭಜನೆ, ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಸಂಜೆ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ತಂಡದಿಂದ ಸ್ವರ ಯಕ್ಷ -ನಾಟ್ಯ – ವೈಭವದ ಬಳಿಕ ರಾತ್ರಿ ಡಿ ಯುನೈಟೆಡ್ ಡಾನ್ಸ್ ಸ್ಟುಡಿಯೋ ಸುಳ್ಯ ಇವರಿಂದ ನೃತ್ಯ ವೈಭವ ನಡೆಯಿತು.
ಮರುದಿನ ಬೆಳಿಗ್ಗೆ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಂಜೆ ಬ್ಯಾಂಡು ವಾಲಗ ಸಿಡಿಮದ್ದುಗಳೊಂದಿಗೆ ಶ್ರೀ ಗಣೇಶನ ವೈಭವದ ಶೋಭಾಯಾತ್ರೆಯೊಂದಿಗೆ ವಿಸರ್ಜನೆ ನಡೆಯಿತು.