ವಿನೋಬನಗರ: ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ವತಿಯಿಂದ ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.


ಈ ವಿದ್ಯಾರ್ಥಿಗಳಿಗೆ ವಿವೇಕಾನಂದ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಾಣಿ ಅವರು ತರಬೇತಿಯನ್ನು ನೀಡಿದ್ದಾರೆ.