ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರು ಇದರ ವತಿಯಿಂದ 14ನೇ ವರ್ಷದ ಶ್ರೀ ಗಣೇಶೋತ್ಸವ ಆ.31 ರಂದು ನಡೆಯಿತು.
ಬೆಳಗ್ಗೆ ಗಣಪತಿ ಹವನ ನಡೆಯಿತು. ಬಳಿಕ ಶ್ರೀ ಗೌರಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆದು ಸ್ಥಳೀಯ ಭಜನಾ ಮಂಡಳಿಗಳಿಂದ ಹಾಗೂ ನಂದ ಕಲಾ ಕುಟುಂಬ ಮೆಟ್ಟಿನಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆದು ಅನ್ನ ಸಂತರ್ಪಣೆ ನಡೆಯಿತು.