ಗುತ್ತಿಗಾರಿನಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

0

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಪಂಚಾಯತ್ ಗುತ್ತಿಗಾರು ಮತ್ತು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಸಂಯುಕ್ತ ಆಶ್ರಯ ದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ – 2022-23 ಗುತ್ತಿಗಾರಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮ ದ ಉದ್ಘಾಟನೆಯನ್ನು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ಗುತ್ತಿಗಾರು ಗ್ರಾ.ಪಂ. ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಎ.ವಿ.ತೀರ್ಥರಾಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇದರ ಸಹಾಯಕ ನಿರ್ದೇಶಕ ರವಿ ನಾಯಕ್, ಗುತ್ತಿಗಾರು ಸ.ಮಾ.ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಚ ವೆಂಕಟ್ ವಳಲಂಬೆ, ಗುತ್ತಿಗಾರು ಗ್ರಾ.ಪಂ. ಸದಸ್ಯರಾದ ಶ್ರೀಮತಿ ಸುಮಿತ್ರ ಮೂಕಮಲೆ, ಮಂಜುಳಾ ಮುತ್ಲಾಜೆ, ಮೈಲಪ್ಪ ಕೊಂಬೆಟ್ಟು, ಗುತ್ತಿಗಾರು ಸ.ಪ.ಪೂ.ಕಾಲೇಜು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ವರ ಡಿ.ಆರ್., ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಅಧ್ಯಕ್ಷ ದಯಾನಂದ, ಸ.ಹಿ.ಪ್ರಾ.ಶಾಲೆ ಗುತ್ತಿಗಾರು ಇದರ ಪದವೀದರೇತರ ಮುಖ್ಯ ಗುರುಗಳಾದ ಶ್ರೀಮತಿ ಉಮಾವತಿ, ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷ ಮಾಧವ ಎರ್ದಡ್ಕ, ಕಾರ್ಯದರ್ಶಿ ಅಚ್ಚುತ ಗುತ್ತಿಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಸ್ವಾಗತಿಸಿದರು. ಸ.ಪ್ರೌ.ಶಾಲೆಯ ಮುಖ್ಯಗುರುಗಳಾದ ಹೆರಾಲ್ಡ್ ನೆಲ್ಸನ್ ಕ್ಯಾಸ್ತಲಿನೋ ವಂದಿಸಿದರು.
ಶಿಕ್ಷಕ ಶಶಿಧರ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮ ದಲ್ಲಿ ಮಡಪ್ಪಾಡಿ ಗ್ರಾ.ಪಂ. ಸದಸ್ಯ ಜಯರಾಮ ಹಾಡಿಕಲ್ಲು, ಶಾಲಾ ಶಿಕ್ಷಕರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ನಿ ಸಮೀಕ್ಷಾ ಇವಳ ಚಿಕಿತ್ಸಾ ನೆರವಿಗೆ ಹಣ ಸಂಗ್ರಹಕ್ಕೆ ಸಚಿವ ಅಂಗಾರ ಚಾಲನೆ ನೀಡಿದರು.