ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

0

 

ಬೆಳ್ಳಾರೆ ಗ್ರಾಮ ಪಂಚಾಯತ್ 2021 – 2022 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಸೆ.03 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಕೆ.ಎಂ.ನೋಡೆಲ್ ಅಧಿಕಾರಿಯಾಗಿದ್ದರು.
ಗ್ರಾಮ ಪಂಚಾಯತ್ ಪಿ.ಡಿ.ಒ ಶ್ರೀಮತಿ ಅನುಷಾ ಸ್ವಾಗತಿಸಿ,ವರದಿ ಮಂಡಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು ,ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.